ಕುಮಾರ್​ ಬಂಗಾರಪ್ಪ ನಿವಾಸಕ್ಕೆ ನಟ ಶಿವರಾಜಕುಮಾರ್​ ಬೆಂಬಲಿಗರಿಂದ ಮುತ್ತಿಗೆ

ಮಂಗಳೂರು(ಬೆಂಗಳೂರು): ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜ್ ಕುಮಾರ್ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ಮನೆಗೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ.‌

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಸಂಸದ ಬಿವೈ ರಾಘವೇಂದ್ರ, ಕಾಂಗ್ರೆಸ್​ನಿಂದ ನಟ ಶಿವರಾಜ್ ಕುಮಾರ್​ ಪತ್ನಿ ಗೀತಾ ಶಿವರಾಜ್ ಕುಮಾರ್​ ಮತ್ತು ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಸ್ಪರ್ಧಿಸಿದ್ದರು. ಬಿವೈ ರಾಘವೇಂದ್ರ ಗೆಲುವಿನ ಬಳಿಕ, ಬಿಜೆಪಿ ನಾಯಕ ಕುಮಾರ್​ ಬಂಗಾರಪ್ಪ ನಟ ಶಿವರಾಜ್ ಕುಮಾರ್​ ಅವರ ಬಗ್ಗೆ ಲಘುವಾಗಿ ಬರೆದು ಫೇಸ್​ಬುಕ್​​ನಲ್ಲಿ ಪೋಸ್ಟ್​​ ಹಾಕಿದ್ದು, ಶಿವಣ್ಣ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.08) ನಟ ಶಿವರಾಜ್ ಕುಮಾರ್ ಬೆಂಬಲಿಗರು ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್​ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ್ದಾರೆ.

ಕುಮಾರ್ ಬಂಗಾರಪ್ಪ ಫೇಸ್​ಬುಕ್​ನಲ್ಲಿ ಪೋಸ್ಟ್, ತಮ್ಮ ಸಹೋದರ ಮಧು ಬಂಗಾರಪ್ಪ, ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಟೀಕಿಸಿರುವ ಜೊತೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿವರಾಜ್ ಕುಮಾರ್ ಅವರ ಬಗ್ಗೆ ಲಘುವಾಗಿ ಬರೆದಿದ್ದರು. ಶಿವರಾಜ್ ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಬರೆದಿದ್ದರು. ಅಲ್ಲದೆ ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು ಎಂದು ಎಚ್ಚರಿಕೆಯನ್ನು ಸಹ ಕೊಟ್ಟಿದ್ದರು.

ಶಿವರಾಜ್ ಕುಮಾರ್ ಅವರ ಬಗ್ಗೆ ರಾಜ್ ಕುಮಾರ್ ಕುಟುಂಬದ ಬಗ್ಗೆ ಮಾತಾಡಿದ್ದಾರೆ. ಇದು ನಮಗೆ ನೋವಾಗಿದೆ. ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಹೇಳಿ ಎಂದು ಅಭಿಮಾಬಿಗಳು ಒತ್ತಾಯಿಸಿದ್ದು ಪೊಲೀಸರು ಅಭಿಮಾನಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here