ಮಂಗಳೂರು: ನಗರದ ಹೊರವಲಯದ ಕಲ್ಲಾಪುವಿನಲ್ಲಿರುವ ಖಾಸಗಿ ಮಾರ್ಕೆಟ್ ಬೆಂಕಿಗಾಹುತಿಯಾಗಿದ್ದು, 6 ಅಂಗಡಿಗಳು ಸುಟ್ಟು ಕರಕಲಾಗಿದೆ.
ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 25 ಅಂಗಡಿಗಳು ಸಂಪೂರ್ಣ ಭಸ್ಮವಾದರೆ ಸುಮಾರು10 ಅಂಗಡಿಗಳು ಭಾಗಶಃ ಬೆಂಕಿಗೆ ಆಹುತಿಯಾಗಿದೆ. ಹಣ್ಣುಹಂಪಲು, ತರಕಾರಿ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ