



ಮಂಗಳೂರು(ಬೋಳಿಯಾರು): ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರ ಮೇಲೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೊಣಾಜೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನುಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) ಮತ್ತು ಮೋನು ಅಲಿಯಾಸ್ ಹಫೀಜ್ (24) ಎಂದು ಗುರುತಿಸಲಾಗಿದೆ.







ಬೋಳಿಯಾರ್ ಜುಮ್ಮಾ ಮಸೀದಿ ಕಮಿಟಿ ಅಧ್ಯಕ್ಷ ಪಿ ಕೆ ಅಬ್ದುಲ್ಲಾ ಅವರು ನೀಡಿದ ದೂರಿನಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ದೂರಿನಲ್ಲಿ ಮಸೀದಿ ಮುಂದೆ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ನಂತರ ಕೆಲವು ಕಾರ್ಯಕರ್ತರು ಮಸೀದಿಯ ಮುಂಭಾಗದಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದು, ಈ ಘಟನೆಯ ಸಿಸಿಟಿವಿ ದೃಶ್ಯವನ್ನು ಬಿಡುಗಡೆಗೊಳಿಸಿದ್ದಾರೆ. ಪಿ ಕೆ ಅಬ್ದುಲ್ಲಾ ನೀಡಿದ ದೂರಿನ ಆಧಾರದ ಮೇರೆಗೆ ಸುರೇಶ್, ವಿನಯ್, ಸುಭಾಷ್, ರಂಜಿತ್, ಧನಂಜಯ ಎಂಬುವವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.















