ಪ್ರಜ್ವಲ್‌ ಕೇಸ್‌ಗೆ ವಿಶೇಷ ವಕೀಲೆ ಜಯನಾ ಕೊಠಾರಿ ರಾಜೀನಾಮೆ

ಮಂಗಳೂರು/ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಹೆಚ್ಚುವರಿ ವಿಶೇಷ ಪ್ರಾಸಿಕ್ಯೂಟರ್‌ ಆಗಿ ನೇಮಕಗೊಂಡಿದ್ದ ಹಿರಿಯ ವಕೀಲೆ ಜಯನಾ ಕೊಠಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಗೃಹ ಇಲಾಖೆಯ ಉಪ ಕಾರ್ಯದರ್ಶಿಗೆ ಜೂ.11 ರಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಈ ಪ್ರಕರಣದ ಪ್ರಮುಖ ವ್ಯಕ್ತಿಗಳಾದ ಶಾಸಕ ಎಚ್‌.ಡಿ.ರೇವಣ್ಣ ಮೊದಲ ಆರೋಪಿಯಾಗಿದ್ದು, ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇವರಿಬ್ಬರ ಮೇಲೆ ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 364ಎ, 365 ಮತ್ತು 34 ಅಡಿ ಎಫ್‌ಐಆರ್‌ ದಾಖಲಿಸಲಾಗಿತ್ತು. 

LEAVE A REPLY

Please enter your comment!
Please enter your name here