ಮಂಗಳೂರು/ಮೈಸೂರು: ಮೈಸೂರು ದಸರಾದಲ್ಲಿ ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ.
ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಸಾವನಪ್ಪಿದ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.