ಮಂಗಳೂರು/ದೆಹಲಿ:18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ನಡೆಯಲಿದೆ.
ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ನಾಲ್ಕನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದ್ದು ನೂತನ ಸ್ಪೀಕರ್ ಆಯ್ಕೆ ನಡೆಯುವ ಸಾಧ್ಯತೆ ಇದೆ ಹೇಳಲಾಗಿದೆ. ಜೂ.25 ರಂದು ರಾಷ್ಟ್ರಪತಿಗಳು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.