ಆನ್‌ಲೈನ್‌ನಲ್ಲಿ ಐಸ್‌ಕ್ರೀಂ ಖರೀದಿ – ಬಟರ್​ಸ್ಕಾಚ್​ ನಲ್ಲಿ ಮನುಷ್ಯನ ಕೈ ಬೆರಳು ಪತ್ತೆ

ಮಂಗಳೂರು/ಮುಂಬೈ: ಜೂ 13 ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನ ಮಲಾಡ್ ನಲ್ಲಿ ಬೆಳಕಿಗೆ ಬಂದಿದೆ. ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್‌ಲೈನ್‌ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಐಸ್‌ ಕ್ರೀಂ ತಿನ್ನುತ್ತಿದ್ದಾ ವೇಳೆ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಮೊದಲು ವಾಲ್ನಟ್​ ಎಂದುಕೊಂಡೆವು ಬಳಿಕ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಇದು ಬೆರಳು ಎಂಬುದು ಅರಿವಾಗಿದೆ ಎಂದಿದ್ದಾರೆ. ನಾನು ಮೂರು ಐಸ್​ಕ್ರೀಂಗಳನ್ನು ಆರ್ಡರ್​ ಮಾಡಿದ್ದೆ, ನಾನು ಬಟರ್​ಸ್ಕಾಚ್​ ಐಸ್​ಕ್ರೀಂ ತಿನ್ನುತ್ತಿದ್ದೆ ಆಗ ಇದ್ದಕ್ಕಿದ್ದಂತೆ ಹಲ್ಲಿಗೇನೋ ತಾಗಿದಂತಾಯಿತು ನಾನು ವಾಲ್ನಟ್ ಅಥವಾ ಚಾಕೊಲೇಟ್​ ಇರಬೇಕು ಎಂದುಕೊಂಡೆ, ಬಳಿಕ ಉಗುಳಿದಾಗ ಅದು ವಾಲ್ನಟ್ ಆಗಿರಲಿಲ್ಲ, ಮನುಷ್ಯನ ಬೆರಳಾಗಿದ್ದು, ಅದನ್ನು ನೋಡಿ ಒಮ್ಮೆ ದಿಗ್ಭ್ರಮೆಗೊಂಡೆ. ನಾನು ವೈದ್ಯೆಯಾಗಿರುವ ಕಾರಣ ಇದು ಹೆಬ್ಬರಳಿನ ಭಾಗ ಎಂಬುದು ನಾನು ಅರ್ಥಮಾಡಿಕೊಂಡೆ ಅದರಲ್ಲಿ ಉಗುರು ಕೂಡ ಇದೆ ಎಂದರು. ನಾನು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದೆ ಎಂದು ವೈದ್ಯೆ ಹೇಳಿದ್ದಾರೆ. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ, ಐಸ್​​ಕ್ರೀಂ ಬ್ರ್ಯಾಂಡ್​ ವಿರುದ್ಧ ಕಲಬೆರಕೆ ಮತ್ತು ಜನರ ಜೀವಕ್ಕೆ ಅಪಾಯ ತಂದಿರುವ ಆರೋಪದಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಬೆರಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ, ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಐಸ್​ಕ್ರೀಂನಲ್ಲಿ ಬೆರಳು ಎಲ್ಲಿಂದ ಬಂತು ಎಂಬುದನ್ನೂ ಪತ್ತೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. 

LEAVE A REPLY

Please enter your comment!
Please enter your name here