ಮಂಗಳೂರು/ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್ ಐ ಆರ್ ದಾಖಲಾಗಿದೆ.
ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ವಂಚನೆ ನಡೆಸಿದ್ದಾರೆ ಎಂದು ದಂಪತಿಗಳು ದೂರು ದಾಖಲಿಸಿದ್ದು ಜೀವಬೆದರಿಕೆ ಇರುವುದಾಗಿಯೂ ದಂಪತಿಗಳು ದೂರಿನಲ್ಲಿ ಹೇಳಿದ್ದಾರೆ. ಬೆಂಗಳೂರಿನ ಸಂಜಯ ನಗರ ಏಇಸಿಎಸ್ ನಿವಾಸಿಯಾದ ತೃಪ್ತಿ ಹೆಗಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಎಫ್ ಐ ಆರ್ ದಾಖಲಿಸದ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದಂತೆ ಈಗ ಅರುಣ್ ಸೋಮಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.