ಮಂಗಳೂರು: ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ನಡೆಯಲಿದ್ದು ಈ ವೇಳೆ ಈ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.