ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ನಗರದ ಉರ್ವಸ್ಟೋರ್ ನಲ್ಲಿರುವ ತುಳುಭವನದಲ್ಲಿ  ಜೂ.13ರಂದು ನಡೆಯಿತು.

ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನ್ಲಿ ಅಲ್ವಾರಿಸ್‌, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ, ಶುಭೋದಯ ಅಳ್ವ, ಗಣೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here