ಇಂದಿನಿಂದ ಜಾರಿ-ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದುಬಾರಿ

ಮಂಗಳೂರು/ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಲಿದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್  ದುಬಾರಿಯಾಗಲಿದೆ.

 

ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಜೂ.15ರ(ಇಂದಿನಿಂದ) ಮಧ್ಯಾಹ್ನ ಹೊರಡಿಸಿರುವ ಸುತ್ತೋಲೆಯಲ್ಲಿ ಸರ್ಕಾರ ಉಲ್ಲೇಖಿಸಿದೆ.ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗಲಿದೆ.

 

LEAVE A REPLY

Please enter your comment!
Please enter your name here