ಶೀಘ್ರದಲ್ಲಿ ಜಿ.ಪಂ/ತಾ.ಪಂ ಚುನಾವಣೆ – ಸಿಎಂ ಸಿದ್ದರಾಮಯ್ಯ

ಮಂಗಳೂರು/ಮೈಸೂರು: ಶೀಘ್ರದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

 

ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ” ಎಂದರು.

“ನಮ್ಮ ಮೇಲೆ ಡಿ ಕೆ ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು? ಇದೆಲ್ಲವನ್ನು ದ್ವೇಷದ ರಾಜಕಾರಣ ಅನ್ನದೇ ಪ್ರೀತಿಯ ರಾಜಕಾರಣ ಎಂದು ಕರೆಯಬೇಕಾ?” ಎಂದು ತಿರುಗೇಟು ನೀಡಿದರು.

“ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ.“ನೀಟ್ ಪರೀಕ್ಷೆಯಲ್ಲಿ ಕೆಲವು ರ‍್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ . ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ. ಎನ್ . ಟಿ .ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

LEAVE A REPLY

Please enter your comment!
Please enter your name here