ಮಂಗಳೂರು/ಬೆಂಗಳೂರು: ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗವು ಜೂನ್ 18ರಂದು ಉಪಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜು.12ರಂದು ವಿಧಾನಪರಿಷತ್ತಿನ 1 ಸ್ಥಾನಕ್ಕೆ ಈ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಜತೆಗೆ, ಬಿಹಾರ, ಉತ್ತರ ಪ್ರದೇಶ, ಆಂಧ್ರಪ್ರದೇಶದಲ್ಲಿ ತಲಾ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.