ಮಂಗಳೂರು/ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ ಪರಿಶೀಲನೆಗಾಗಿ 8 ಅರ್ಜಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿವೆ.
6 ರಾಜ್ಯಗಳಿಂದ ಒಟ್ಟು 8 ದೂರುಗಳು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಚುನಾವಣಾ ಆಯೋಗ ಇವಿಎಂಗಳನ್ನು ತಿರುಚಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಅಭ್ಯರ್ಥಿಗಳ ದೂರಿನ ಹಿನ್ನೆಲೆಯಲ್ಲಿ ಇವಿಎಂ ಮೆಷಿನ್ ನಲ್ಲಿ ಬಳಸಲಾಗುವ ಮೈಕ್ರೋ ಕಂಟ್ರೋಲರ ಚಿಪ್ ಗಳನ್ನು ತಿರುಚಲಾಗಿದೆಯೇ ಎಂಬ ಪರಿಶೀಲನೆ ನಡೆಯಲಿದೆ. ಆಶ್ಚರ್ಯವೆಂದರೆ ಬಿಜೆಪಿ ಅಭ್ಯರ್ಥಿಗಳು ಸಹ ಇವಿಎಂ ತಿರುಚಿರುವ ಬಗ್ಗೆ ಸಂದೇಹ ವ್ಯಕ್ತಪಡಿಸಿ ದೂರು ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೂ ಇದ್ದಾರೆ.