ಜೂ.26 ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ – ಆರೆಂಜ್‌/ ರೆಡ್‌ ಆಲರ್ಟ್‌ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 26ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನ ಮುನ್ಸೂಚನೆ ನೀಡಲಾಗಿದೆ. ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಕಂಟ್ರೋಲ್‌ ರೂಮ್‌ 1077 ಅಥವಾ 0824 2442590 ಮತ್ತು ಮಂಗಳೂರು ಮಹಾನಗರಪಾಲಿಕೆಯ 0824 2220306 ಮತ್ತು 2220319 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಇನ್ನುಳಿದಂತೆ ಮಂಗಳೂರು ತಾಲೂಕು – 0824 2220587, ಉಳ್ಳಾಲ ತಾಲೂಕು – 0824 2204424, ಬಂಟ್ವಾಳ ತಾಲೂಕು – 08255 232500, ಪುತ್ತೂರು ತಾಲೂಕು – 0851 230349, ಬೆಳ್ತಂಗಡಿ ತಾಲೂಕು – 0856 232047, ಸುಳ್ಯ ತಾಲೂಕು – 0857 231231, ಮೂಡಿಬಿದಿರೆ ತಾಲೂಕು – 08258 238100, ಕಡಬ ತಾಲೂಕು – 08251 260435 ಮತ್ತು ಮೂಲ್ಕಿ ತಾಲೂಕು – 0824 2294496 ನಂಬರ್ ಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here