ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ, ತುಲಾಭಾರ ಸೇವೆ

ಮಂಗಳೂರು/ಸುಬ್ರಹ್ಮಣ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.


ಧರ್ಮಸ್ಥಳ ಕ್ಷೇತ್ರ ದರ್ಶನ ಪಡೆದ ಬಳಿಕ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಯಡಿಯೂರಪ್ಪ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿ ಶಾಲು ಹೊದಿಸಿ, ಹೂಗುಚ್ಛ ನೀಡಿ ಬರಮಾಡಿಕೊಂಡರು. ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದಲೂ ಅಧಿಕಾರಿಗಳು ಸ್ವಾಗತಿಸಿದರು.

ಯಡಿಯೂರಪ್ಪ ಅವರು ದೇವಸ್ಥಾನದಲ್ಲಿ ತುಲಾಭಾರ, ಮಹಾಭಿಷೇಕ, ಮಹಾಪೂಜೆ ಸೇವೆ ನಡೆಸಿದರು. ಇದಕ್ಕೂ ಮುನ್ನ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಯಡಿಯೂರಪ್ಪ ದೇವರ ದರ್ಶನ ಪಡೆದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ, ಸಿ ಎ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ಭಟ್, ಶಕ್ತಿ ಕೇಂದ್ರದ ಪ್ರಮುಖ್ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯತ್ ಸದಸ್ಯರು, ಕೊಕ್ಕಡ ಬೂತ್ ಸಮಿತಿಯ ಪದಾಧಿಕಾರಿಗಳು ಜೊತೆಯಲ್ಲಿದ್ದರು.

ಇಲ್ಲಿಂದ ಸುಳ್ಯಕ್ಕೆ ತೆರಳಲಿರುವ ಬಿ.ಎಸ್.ವೈ ಅಪರಾಹ್ನ ನಡೆಯುವ ಬಿಜೆಪಿ ಪಕ್ಷದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

 

LEAVE A REPLY

Please enter your comment!
Please enter your name here