ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ ಕೆಜಿ ಯುಕೆಜಿ- ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಮಂಗಳೂರು(ಬೆಂಗಳೂರು): ಅಂಗನವಾಡಿ ಕೇಂದ್ರಗಳನ್ನು ಮಾಂಟೆಸ್ಸರಿಗಳನ್ನಾಗಿ ಮೇಲ್ದರ್ಜೆಗೆ ಏರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ.

ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರಿ ಶಾಲೆಗಳಲ್ಲಿ ಎಲ್‌ ಕೆಜಿ, ಯುಕೆಜಿ ಪ್ರಾರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಮಾಡುತ್ತಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜತೆ ಸಿಎಂ ಸಭೆ ನಡೆಸಿದ್ದಾರೆ.

ಅಂಗನವಾಡಿಗಳನ್ನು ಅಪ್ ಗ್ರೇಡ್ ಮಾಡಲು ಸಿಎಂ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಎಂ ಇದಕ್ಕೆ ಒಪ್ಪಿದ್ದಾರೆ. ಅಂಗನವಾಡಿಗಳನ್ನು ಇನ್ನು ಮುಂದೆ ಸರ್ಕಾರಿ ಮಾಂಟೆಸ್ಸರಿಗಳಾಗಿ ಅಪ್ ಗ್ರೇಡ್ ಮಾಡಲಾಗುತ್ತದೆ. ಇಲ್ಲಿ ಎಲ್‌ ಕೆಜಿ, ಯುಕೆಜಿ ತರಗತಿಗಳನ್ನು ಕನ್ನಡ, ಇಂಗ್ಲಿಷ್ ಮಾಧ್ಯಮಗಳಲ್ಲಿ ಪ್ರಾರಂಭ ಮಾಡಲು ತೀರ್ಮಾನ ಮಾಡಲಾಗಿದೆ. ಮೊದಲ ಹಂತದಲ್ಲಿ 9 ಸಾವಿರ ಅಂಗನವಾಡಿಗಳನ್ನು ಮಾಂಟೆಸ್ಸರಿಗಳಾಗಿ ಅಪ್ ಗ್ರೇಡ್ ಮಾಡಲು ತೀರ್ಮಾನ ಮಾಡಲಾಗಿದೆ. ಮಾಂಟೆಸ್ಸರಿಗಳಲ್ಲಿ ಸಮವಸ್ತ್ರ, ಶೂ, ಬ್ಯಾಗ್‌ಗಳನ್ನು ನೀಡಲಾಗುತ್ತದೆ. ಎಲ್ಲಾ ಸಿದ್ದತೆ ಮಾಡಿಕೊಂಡು ಆರ್ಥಿಕ ಇಲಾಖೆ ಜೊತೆ ಮಾತನಾಡಲಾಗುವುದು ಎಂದು ಸಚಿವೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here