ಬೆಂಗಳೂರು/ಮಂಗಳೂರು: ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿ (50ವ) ನಿಧನರಾಗಿದ್ದಾರೆ.
ಹಂಸಾ ಮೊಯ್ಲಿ ಕೆಲವು ದಿನಗಳಿದಂದ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಜೂ.29ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಹಂಸಾ ಮೊಯ್ಲಿ ಭರತನಾಟ್ಯ ಕಲಾವಿದೆಯಾಗಿದ್ದು, ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಇವರು ವೀರಪ್ಪ ಮೊಯ್ಲಿಯ 3ನೇ ಪುತ್ರಿಯಾಗಿದ್ದು ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಮೂಲಕ ಜನಾನುರಾಗಿದ್ದರು.ಅಲ್ಲದೆ ತಮ್ಮದೇ ಆದ ಚೌಕಟ್ಟಿನಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.