ಹಾಥರಸ್‌ ಕಾಲ್ತುಳಿತ, ಏರಿಕೆಯಾದ ಸಾವಿನ ಸಂಖ್ಯೆ-ಜನದಟ್ಟಣೆಯೇ ಪ್ರಮುಖ ಕಾರಣ

ಹಾಥರಸ್: ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯ ಸಿಕಂದಾ ರಾವ್ ಪ್ರದೇಶದ ಫೂಲರಾಯ್ ಗ್ರಾಮದಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯ ಸಿಕಂದಾ ರಾವ್ ಪ್ರದೇಶದ ಫೂಲರಾಯ್ ಗ್ರಾಮದಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಸಂಬಂಧ ಕಾರ್ಯಕ್ರಮ ಆಯೋಜಕರಾದ ದೇವಪ್ರಕಾಶ್ ಮಧುಕರ್ ಸೇರಿದಂತೆ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ 2023ರ ಸೆಕ್ಷನ್ 105, 110, 126 (2), 223 ಮತ್ತು 238ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್, ಕಾಲ್ತುಳಿತ ಸಂಭವಿಸಿದ್ದಕ್ಕೆ ಜನದಟ್ಟಣೆಯೂ ಪ್ರಮುಖ ಕಾರಣ ಎಂದು ಹೇಳಿದ್ದಾರೆ.‘ಸತ್ಸಂಗ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸರ್ಕಾರ್ ವಿಶ್ವಹರಿ ಭೋಲೆಬಾಬಾ ಅವರ ಬೆಂಗಾವಲು ವಾಹನಗಳ ಸಂಚಾರಕ್ಕಾಗಿ ಒಂದು ದ್ವಾರವನ್ನು ಆಯೋಜಕರು ಮುಚ್ಚಿದ್ದರಿಂದ ಮತ್ತೊಂದು ದ್ವಾರದ ಮೇಲೆ ಒತ್ತಡ ಹೆಚ್ಚಾಯಿತು. ಜತೆಗೆ, ಭೋಲೆಬಾಬಾ ಅವರಿದ್ದ ವಾಹನದ ಹಿಂದೆ ಭಕ್ತರು ಓಡುತ್ತಿದ್ದರು. ಕೆಲವರು ಸ್ಥಳದಿಂದ ಮಣ್ಣು ಸಂಗ್ರಹಿಸಲು ಮುಗಿಬಿದ್ದಿದ್ದು ಕೂಡ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಸಿಂಗ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here