ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಅವರಿಗೆ ವರ್ಗಾವಣೆಯಾಗಿದ್ದು, ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ರವಿಚಂದ್ರ ನಾಯಕ್ ಅವರು ಶಿವಮೊಗ್ಗ ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದರು. ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ರವಿಚಂದ್ರ ನಾಯಕ್ ಅವರು ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಗಳೂರು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಆಗಿಯೂ ಸೇವೆ ಸಲ್ಲಿಸಿದ್ದರು.