ಮಂಗಳೂರು/ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಶೀಘ್ರದಲ್ಲೇ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಬರಲಿದೆ. ಈ ಬಗ್ಗೆ ಆಡಳಿತಾತ್ಮಕ ವ್ಯವಸ್ಥೆ ಸಿದ್ಧಗೊಳಿಸಲು ಇಲಾಖೆ ಮುಂದಾಗಿದೆ.
ರಾಜ್ಯದ ಎಲ್ಲ ಇಲಾಖೆಗಳ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರದ ಪ್ರತಿಷ್ಠಾಪಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಈ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಕಚೇರಿಗಳಲ್ಲಿ ಶೀಘ್ರದಲ್ಲೇ ಈ ವ್ಯವಸ್ಥೆ ಜಾರಿ ಬರಲಿದೆ. ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಎಂಬ ನಿಯಮ ಜಾರಿಗೆ ಬರಲಿದ್ದು, ವಿಳಂಬವಾಗಿ ಬರುವ ಇಲ್ಲವೇ ಅವಧಿಗೆ ಮುನ್ನ ಕಚೇರಿ ತೊರೆಯುವ ಸರ್ಕಾರಿ ನೌಕರರು ಸಂಕಷ್ಟಕ್ಕೊಳಗಾಗಲಿದ್ದಾರೆ.