ಚಿನ್ನಾಭರಣ ಕಳವು ಪ್ರಕರಣ- ಆರೋಪಿಗಳ ಬಂಧನ

ಮಂಗಳೂರು: ಉಳ್ಳಾಲ ಧರ್ಮನಗರದ ನಿವಾಸಿ ಶ್ರೀಧರ್ ಎಂಬವರ ಮನೆಯಿಂದ ಚಿನ್ನಾಭರಣ ಕಳ್ಳತನ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಶ್ರೇಯಸ್, ತೌಸಿಫ್, ಉರ್ವದ ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಶ್ರೇಯಸ್, ಪೃಥ್ವಿರಾಜ್ ಮತ್ತು ತೌಸಿಫ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜೂ.8ರಂದು ಬೆಳಿಗ್ಗೆ 8 ಗಂಟೆಯಿಂದ ಜೂ.16ರ ಮಧ್ಯಾಹ್ನ 12 ಗಂಟೆ ಅವಧಿಯಲ್ಲಿ ಉಳ್ಳಾಲ ಧರ್ಮನಗರದ ನಿವಾಸಿ ಶ್ರೀಧರ್ ಎಂಬುವರ ಬೆಡ್‌ರೂಮ್ ಕಪಾಟಿನಿಂದ ಸುಮಾರು 15 ಲಕ್ಷ ಮೌಲ್ಯದ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ. ಈ ಕುರಿತು ಶ್ರೀಧರ್ ಅವರು ಜೂ.28ರಂದು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಕಳ್ಳತನ ಪ್ರಕರಣವನ್ನ ದಾಖಲಿಸಿಕೊಂಡು ಕಾರ್ಯಚರಣೆಗೆ ಇಳಿದಿದ್ದರು.
ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ, ಪೊಲೀಸ್ ಉಪ ಕಮಿಷನರ್ (ಅಪರಾಧ ಮತ್ತು ಸಂಚಾರ) ಸಿದ್ದಾರ್ಥ್ ಗೋಯಲ್, ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಬಿ ಪಿ ದಿನೇಶ್ ಕುಮಾರ್, ಮತ್ತು ಸಹಾಯಕ ಪೊಲೀಸ್ ಕಮಿಷನರ್ (ದಕ್ಷಿಣ) ಧನ್ಯಾ ನಾಯಕ್, ಉಳ್ಳಾಲ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಮತ್ತು ಅವರ ತಂಡ ತನಿಖೆ ಆರಂಭಿಸಿದ್ದರು.

ಇಬ್ಬರು ಬಾಲಕರು ಸೇರಿದಂತೆ ಆರೋಪಿಗಳಾದ ಶ್ರೇಯಸ್ಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಬೆಳ್ತಂಗಡಿರವರನ್ನು ವಶಕ್ಕೆ ಪಡೆದು ಅವರು ಕಳವು ಮಾಡಿ ಮಂಗಳೂರು ನಗರದ ವಿವಿಧ ಚಿನ್ನಾಭರಣ ಅಂಗಡಿಗಳಿಗೆ ಮಾರಾಟ ಮಾಡಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧ ಜೆ.ಜೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here