ಮಂಗಳೂರು/ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುವುದು ಪದೇ ಪದೇ ಸಾಬೀತಾಗುತ್ತಿದ್ದು ವಿ.ವಿ. ಪುರಂನಲ್ಲಿ ಕಾಮುಕನ ಅಟ್ಟಹಾಸ ಹೆಚ್ಚಾಗಿದೆ.
ಬೈಕ್ನಲ್ಲಿ ಬರುವ ಕಾಮುಕನೋರ್ವ ವಿ.ವಿ. ಪುರಂ ರಸ್ತೆಯಲ್ಲಿ ಓಡಾಡುವ ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡುತ್ತಿದ್ದಾನೆ. ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಆ ರಸ್ತೆಗೆ ಇಳಿಯುವ ಕಾಮುಕ, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿರುವ ಕಡೆ ಬೈಕ್ ನಿಲ್ಲಿಸಿ ಮರ್ಮಾಂಗ ತೋರಿಸಿ ಪರಾರಿ ಆಗ್ತಾನೆ. ಕಾಮುಕನ ಕೃತ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಇದರಿಂದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ಓಡಾಡಲು ಭಯಪಡುವಂತಾಗಿದೆ. ವಿದ್ಯಾರ್ಥಿನಿಯರು ವಿ.ವಿ.ಪುರಂ ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು ಕಾಮುಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.