ಕರ್ನಾಟಕದಾದ್ಯಂತ ಬೆಳ್ಳಂ ಬೆಳಗ್ಗೆಯೇ 56 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ

ಮಂಗಳೂರು/ಬೆಂಗಳೂರು: ಕರ್ನಾಟಕದಾದ್ಯಂತ ಗುರುವಾರ ಬೆಳ್ಳಂ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಡ್ಯ, ಮೈಸೂರು, ಹಾಸನ, ಚಿತ್ರದುರ್ಗ ಸೇರಿದಂತೆ 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ​​11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

ಕೋಲಾರ ತಹಶೀಲ್ದಾರ್​ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಹಾಸನದ ಗ್ರೇಡ್-1 ಕಾರ್ಯದರ್ಶಿ ಜಗದೀಶ್​ ಮನೆ ಮೇಲೆ ದಾಳಿ ನಡೆದಿದೆ. ದಾಳಿಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here