ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ನಿಧನ

ಮಂಗಳೂರು/ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ(51) ಗುರುವಾರ(ಜು.11) ರಾತ್ರಿ ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ನಿರೂಪಣೆಯ ಜೊತೆಗೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು. ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿದ್ದರು. 2015ರಲ್ಲಿ ಸೃಜನ್‌ ಲೋಕೇಶ್‌ ನೇತೃತ್ವದಲ್ಲಿ ಪ್ರಾರಂಭವಾದ ‘ಮಜಾ ಟಾಕೀಸ್‌’ ಕಾರ್ಯಕ್ರಮದಲ್ಲಿ ವರಲಕ್ಷ್ಮೀ ಎಂಬ ಪಾತ್ರವನ್ನು ಮಾಡಿ ಗಮನ ಸೆಳೆದಿದ್ದರು. 2013 ಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು. ಅಪರ್ಣಾ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

 

LEAVE A REPLY

Please enter your comment!
Please enter your name here