



ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಸೇರಿದಂತೆ ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಭೇಟಿ ನೀಡಿದ್ದಾರೆ.







ಕಾರಣಿಕ ಕ್ಷೇತ್ರವಾಗಿರುವ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಈಗಾಗಲೇ ಹಲವಾರು ಸೆಲೆಬ್ರಿಟಿಗಳು ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಳುನಾಡಿನವರೇ ಆಗಿರುವ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರ, ಪುತ್ರಿ, ಅಳಿಯನ ಜೊತೆ ಖ್ಯಾತ ನಟಿ ಕತ್ರಿನಾ ಕೈಫ್ ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಕೋಲದಲ್ಲಿ ಭಾಗವಹಿಸಿದ್ದಾರೆ. ಜು.14 ರ ಭಾನುವಾರ ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ನಡೆದ ಹರಕೆ ಕೋಲದಲ್ಲಿ ಬಾಲಿವುಡ್ ನಟ ನಟಿಯರು ಭಾಗವಹಿಸಿದ್ದಾರೆ. ಬಳಿಕ ರಾತ್ರಿ ನಡೆದ ಕೋಲದಲ್ಲಿ ಪುರಷರಿಗಷ್ಟೇ ಅವಕಾಶ ಇದ್ದ ಕಾರಣ ಮಹಿಳೆಯರು ಹೊರ ಬಂದಿದ್ದಾರೆ. ಈ ವೇಳೆ ಕ್ಷೇತ್ರದ ಕಚೇರಿಯಲ್ಲಿ ಕತ್ರಿನಾ ಕೈಫ್ ಕಾಣಿಸಿಕೊಂಡಿದ್ದು ಕೊರಗಜ್ಜನ ಬಗ್ಗೆ ಮತ್ತು ಕ್ಷೇತ್ರದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕ್ಷೇತ್ರದಲ್ಲಿದ್ದ ಕತ್ರಿನಾ ಕೈಫ್ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.















