ಮಂಗಳೂರು/ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.
ಪ್ರಾಯೋಗಿಕವಾಗಿ ಈ ಯೋಜನೆಯನ್ನು ಬೆಂಗಳೂರು, ವಿಜಯಪುರ, ರಾಯಚೂರು ಹಾಗೂ ಕಲಬುರಗಿಯ ಕೆಲ ಆಯ್ದ ಮದರಸಾಗಳಲ್ಲಿ ಶುರು ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಮದರಸಾ ವಿಷಯಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಈ ನಿರ್ಧಾರಕ್ಕೆ ಹರ್ಷ ವ್ಯಕ್ತವಾಗಿದೆ.