ಉ.ಪ್ರದೇಶದ ಗೊಂಡಾದಲ್ಲಿ ಹಳಿತಪ್ಪಿದ ದಿಬ್ರುಗಢ ಎಕ್ಸ್‌ಪ್ರೆಸ್ – ಇಬ್ಬರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಗಳೂರು/ಗೊಂಡಾ: ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ 15 ಬೋಗಿಗಳು ಹಳಿತಪ್ಪಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಧಿಕಾರಿಗಳ ಪ್ರಕಾರ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ಗೊಂಡಾ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಾಥ್ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದಾರೆ.  ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಗೋರಖ್‌ಪುರ ಮತ್ತು ಗೊಂಡಾದಿಂದ ಹೆಚ್ಚುವರಿ ರೈಲ್ವೆ ರಕ್ಷಣಾ ತಂಡವನ್ನು ಕರೆಸಿಕೊಳ್ಳಲಾಗಿದೆ.  ಘಟನೆ ಮಧ್ಯಾಹ್ನ 2.37 ರ ಸುಮಾರಿಗೆ ಸಂಭವಿಸಿದೆ ಎಂದು ಈಶಾನ್ಯ ರೈಲ್ವೆ ಸಿಪಿಆರ್‌ಒ ಪಂಕಜ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಘಟನೆಯ ನಂತರ ರೈಲ್ವೆ ಸಚಿವಾಲಯ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ಅವುಗಳು ಈ ರೀತಿ ಇಜೆ – ವಾಣಿಜ್ಯ ನಿಯಂತ್ರಣ ಟಿನ್ಸುಕಿಯಾ: 9957555984; ಫರ್ಕೇಟಿಂಗ್ (FKG): 9957555966; ಮರಿಯಾನಿ (MXN): 6001882410; ಸಿಮಲ್ಗುರಿ (SLGR): 8789543798; ಟಿನ್ಸುಕಿಯಾ (NTSK): 9957555959; ದಿಬ್ರುಗಢ್ (DBRG): 9957555960. ಸಚಿವಾಲಯವು ಗುವಾಹಟಿ ನಿಲ್ದಾಣಕ್ಕಾಗಿ ಸಂಖ್ಯೆಗಳನ್ನು ಸಹ ನೀಡಿದೆ. ಅವು ಹೀಗಿದೆ: 0361-2731621, 0361-2731622, 0361-2731623.

LEAVE A REPLY

Please enter your comment!
Please enter your name here