ಸಾರಿಗೆ ಇಲಾಖೆಯ ಚಾಲಕರು, ನಿರ್ವಾಹಕರು ರೀಲ್ಸ್‌ ಮಾಡುವಂತಿಲ್ಲ – ಕರ್ತವ್ಯ ನಿರ್ವಹಣೆ ವೇಳೆ ರೀಲ್ಸ್​ ಮಾಡಿದ್ರೆ ಅಮಾನತು

ಮಂಗಳೂರು/ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆಯ ಕೆಎಸ್‌ಆರ್‌ ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಕೆಕೆಆರ್‌ಟಿಸಿ,  ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೀಲ್ಸ್​ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ ಎಂದು ಹೇಳಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಚಾಲಕ ಛತ್ರಿ ಹಿಡಿದುಕೊಂಡು ಬಸ್​ ಓಡಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಕರ್ನಾಟಕ ಬಿಜೆಪಿ ವ್ಯಂಗ್ಯಚಿತ್ರವನ್ನು ಹಂಚಿಕೊಂಡಿದ್ದು ಕರ್ನಾಟಕದ ಸರ್ಕಾರದಿಂದ ಛತ್ರಿ ಭಾಗ್ಯಕ್ಕೆ ಚಾಲನೆ ಎಂದು ಸರ್ಕಾರವನ್ನು ಟೀಕಿಸಿತ್ತು. ಇದಾದ ಬಳಿಕ ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕ ರೀಲ್ಸ್ ಮಾಡಲು ಹೋಗಿ ಮುಂದೆ ಹೋಗುತ್ತಿದ್ದ ಚಕ್ಕಡಿಯನ್ನು ಗಮನಿಸಿದೆ ಹಿಂಬದಿಯಿಂದ ಚಕ್ಕಡಿಗೆ ಡಿಕ್ಕಿ ಹೊಡೆದಿದ್ದು ಎರಡು ಎತ್ತು ಸ್ಥಳದಲ್ಲೆ ಮೃತಪಟ್ಟಿದ್ದವು. ರೈತ ಮಂಜುನಾಥ್ ರಂಗಪ್ಪ ಹೆಗ್ಗಣ್ಣವರ  ಮೆದಳು‌ ನಿಷ್ಕ್ರೀಯಗೊಂಡಿತ್ತು.

LEAVE A REPLY

Please enter your comment!
Please enter your name here