ಮಂಗಳೂರು (ಹಾಸನ): ರಾಜ್ಯದ ಹಲವೆಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,ಅಲ್ಲಲ್ಲಿ ಬೃಹತ್ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ.
ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ರಸ್ತೆ 200 ಮೀಟರ್ಗೂ ಹೆಚ್ಚು ದೂರ ಕುಸಿದಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಈ ಭೂ ಕುಸಿತ ಸಂಭವಿಸಿದ್ದು, ಹತ್ತಾರು ಗ್ರಾಮಗಳ ಸಂಪರ್ಕ ಕಡಿದು ಹೋಗಿದೆ. ಈ ರಸ್ತೆಯ ಸಮೀಪದಲ್ಲಿ ಎತ್ತಿನಹೊಳೆ ಕಾಮಗಾರಿ ಕೆಲಸ ನಡೆಯುತ್ತಿದ್ದು, ಮಣ್ಣ ಸಡಿಲಗೊಂಡು ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಕುಸಿತದ ವೇಳೆ ಯಾವುದೇ ವಾಹನ ಇಲ್ಲದೇ ಇರುವುದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.