ಮಂಗಳೂರು: ನ.8, 2019ರಂದು ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಮಂಗಳೂರು ಕಾರಾಗೃಹದಿಂದ ವಿಚಾರಣೆಗಾಗಿ ಬೆಳ್ತಂಗಡಿ ನ್ಯಾಯಾಲಕ್ಕೆ ಕರೆದೊಯ್ದು ವಿಚಾರಣೆ ನಡೆದು ತಿರುಗಿ ಮಂಗಳೂರಿನ ಕಾರಾಗೃಹಕ್ಕೆ ಬರುವ ವೇಳೆ ಬೈಲ್ ರಸ್ತೆಯ ದಿವ್ಯಾ ಎನ್ ಕ್ಲೇವ್ ಅಪಾರ್ಟ್ಮೆಂಟ್ ನ ಬಳಿ ಜೊತೆಗಿದ್ದ ಭದ್ರತಾ ಪೊಲೀಸ್ ಸಿಬ್ಬಂದಿಯನ್ನು ತಳ್ಳಿಹಾಕಿ, ಕೈಕೋಳದಿಂದ ಹಲ್ಲೆ ನಡೆಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ತಪ್ಪಿಸಿಕೊಂಡು ಓಡಿ ಹೋಗಿದ್ದ ಬಗ್ಗೆ ಬಂಟ್ವಾಳ ತಾಲೂಕಿನ ಗೂಡಿನ ಬಳಿ ನಿವಾಸಿ ಮಹಮ್ಮದ್ ರಫೀಕ್ ಯಾನೆ ರಫಿ ಎಂಬಾತನ ವಿರುದ್ದ ದಾಖಲಾಗಿದ್ದ ಪ್ರಕರಣ ನ್ಯಾಯಾಲಯದಲ್ಲಿ ಸಾಬೀತಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿರುದ್ದ ಮಂಗಳೂರು ಪೂರ್ವ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೂರ್ವ ಪೋಲಿಸ್ ಠಾಣೆಯ ಉಪ ನಿರೀಕ್ಷಕ ಮಾರುತಿ ಎಸ್‌ವಿ ಪ್ರಕರಣದ ಭಾಗಶಃ ತನಿಖೆಯನ್ನು ಮಾಡಿದ್ದು ಆ ಬಳಿಕ ಆಗಿನ ಪೋಲಿಸ್ ನಿರೀಕ್ಷಕ ಸವಿತ್ರತೇಜ್ ತನಿಖೆ ನಡೆಸಿ ಮಾನ್ಯ ನ್ಯಾಯಾಲಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಆರನೇ ಜೇ ಎಂ ಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರಿ ಅವರು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಕಾಲಂ 332 ಐ ಪಿ ಸಿ, ಅಪರಾಧಕ್ಕೆ 6 ತಿಂಗಳು ಸಾದ ಜೈಲು ವಾಸ, 324 ಐ ಪಿ ಸಿ ಅಪರಾಧಕ್ಕೆ 6 ತಿಂಗಳು ಜೈಲು ಮತ್ತು 1500 ರೂಪಾಯಿ ದಂಡ, ದಂಡ ತೆರಲು ತಪ್ಪಿದಲ್ಲಿ 15 ದಿನ ಸಾದಾ ಸಜೆ, ಕಲಂ 353 ಐ ಪಿ ಸಿ ಅಪರಾಧಕ್ಕೆ 6 ತಿಂಗಳು ಸಜೆ ಮತ್ತು 1500 ದಂಡ ದಂಡ ತೆರಲು ತಪ್ಪಿದಲ್ಲಿ 15 ದಿನ ಸಜೆ , ಕಲಂ 224 ಅಪರಾಧಕ್ಕೆ 3 ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಪುತ್ತೂರಿನ ಜನಾರ್ದನ್ ಅವರು ವಾದಿಸಿದ್ದರು.