ಮಂಗಳೂರು(ಅಮೇರಿಕಾ): ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ವಾಪಸ್ ಗೆ ನಾಸಾ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಮಧ್ಯೆ ಇಬ್ಬರು ಗಗನಯಾನಿಗಳು ಡೇಂಜರ್ ಝೋನ್ ನಲ್ಲಿದ್ದು, ಮುಂದಿನ 14 ದಿನದೊಳಗೆ ಭೂಮಿಗೆ ವಾಪಸ್ ಕರೆಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ.
ಸಂದಿಗ್ಧತೆ, ಒತ್ತಡಕ್ಕೆ ಸಿಲುಕಿರುವ ನಾಸಾ ಸತತ ಪ್ರಯತ್ನ ಮಾಡುತ್ತಿದ್ದು, ಆಗಸ್ಟ್ 19-20ರೊಳಗೆ ಭೂಮಿಗೆ ವಾಪಸ್ ಕರೆತರಲೇಬೇಕಾಗಿದೆ. ಒಂದು ದಿನ ಹೆಚ್ಚಾದ್ರೂ ಗಗನಯಾನಿಗಳ ಪ್ರಾಣಕ್ಕೆ ಕಂಟಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ಜೂ.5ರಂದು ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಸುನಿತಾ ಗಗನಯಾನ ಕೈಗೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ರೆ ಇಷ್ಟೊತ್ತಿಗಾಗಲೇ ಭೂಮಿಗೆ ವಾಪಸ್ ಆಗಬೇಕಿತ್ತು. ಜೂನ್ 6 ರಂದು ಕ್ಯಾಪ್ಸುಲ್ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿತ್ತು. ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು ಅವರಿಬ್ಬರೂ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಳ್ಳಲೇಬೇಕಾದ ಪರಿಸ್ಥಿತಿ ಎದುರಾಗಿದೆ.