



ಮಂಗಳೂರು (ನವದೆಹಲಿ): ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಅನಾರೋಗ್ಯದ ಕಾರಣ ಮಂಗಳವಾರ(ಆ.6) ಅಪೋಲೊ ಆಸ್ಪತ್ರೆಗೆ ಮತ್ತೆ ದಾಖಲಿಸಲಾಗಿದೆ.



96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರಿಗೆ ನರರೋಗ ತಜ್ಞ ಡಾ., ವಿನಿತ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಜುಲೈನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಿಸುವುದಕ್ಕೂ ಮೊದಲು ಅಡ್ವಾಣಿ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು.















