ಲಾರಿ ಬೈಕ್ ಡಿಕ್ಕಿ – ಗರ್ಭಿಣಿ ಮಹಿಳೆ ಸಾವು – ಹೊಟ್ಟೆಯಿಂದ ಆಚೆ ಬಂದ ಶಿಶು

ಬೆಂಗಳೂರು: ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ 7 ತಿಂಗಳ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ನೆಲಮಂಗಲದ ತೋಟನಹಳ್ಳಿ ಗ್ರಾಮದ ನಿವಾಸಿ ಸಿಂಚನಾ ಮೃತಪಟ್ಟ ದುರ್ಧೈವಿ. ಇವರು ಶಿವಗಂಗೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಬಳಿಕ ಬೈಕ್‌ನಲ್ಲಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎಡೆಹಳ್ಳಿ ಮಾರ್ಗವಾಗಿ ಜಲ್ಲಿ ತುಂಬಿಕೊAಡು ಹಿಂಬದಿಯಿAದ ವೇಗವಾಗಿ ಬಂದ ಲಾರಿ, ಬೈಕ್‌ಗೆ ಡಿಕ್ಕಿಯಾಗಿದೆ. ಇದರಿಂದ ಗರ್ಭಿಣಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಗರ್ಭಿಣಿ ಮೇಲೆ ಲಾರಿ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಶಿಶು ಹೊರಗಡೆ ಬಂದಿದೆ. ಘಟನೆಯಿಂದಾಗಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಧಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here