‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ- ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

ಮಂಗಳೂರು (ನವದೆಹಲಿ): ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋಲನುಭವಿಸಿದ್ದೇನೆ’ ಎಂದಿದ್ದಾರೆ.

ಒಲಿಂಪಿಕ್ಸ್​​​ನಲ್ಲಿ ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕುಸ್ತಿಪಟು ರೋಚಕವಾಗಿ ಫೈನಲ್‌ಗೆ ಪ್ರವೇಶಿಸಿದ್ದರು. ವಿನೇಶ್ ಫೋಗಟ್ ಖಚಿತವಾಗಿ ಬಂಗಾರ ಗೆಲ್ಲುವ ನಿರೀಕ್ಷೆ ಭಾರತೀಯರಿಗಿತ್ತು. ಆದರೆ, ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಅಧಿಕವಿದ್ದ ಕಾರಣದಿಂದ, 29 ವರ್ಷದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಒಂದು ದಿನದಲ್ಲೇ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆ.

‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ. ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here