ಸಿದ್ಧರಾಮಯ್ಯ ಭೇಟಿಯಾದ ಹರಿಪ್ರಸಾದ್ – ಮುನಿಸು ಮರೆತು ಒಂದಾದ ನಾಯಕರು – ಸಂಪುಟ ಸೇರ್ಪಡೆ ಸಾಧ್ಯತೆ

ಮಂಗಳೂರು(ಬೆಂಗಳೂರು): ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಚಿವ ಸ್ಥಾನದಿಂದ ವಂಚಿತರಾಗಿ ಮುನಿಸಿಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಆ.7ರಂದು ರಾತ್ರಿ ಮುನಿಸು ಮರೆತು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಹರಿಪ್ರಸಾದ್ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.

ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿದ ಸಿಎಂ ಸಿದ್ಧರಾಮಯ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸದ್ಯದ ರಾಜಕೀಯ ಬೆಳವಣಿಗೆ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ.
ಸಂಪುಟಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನು ಸೇರಿಸಿಕೊಳ್ಳಲು ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಆಗಸ್ಟ್ ಕೊನೆಯ ವಾರದಲ್ಲಿ ಸಂಪುಟಕ್ಕೆ ಹರಿಪ್ರಸಾದ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here