ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ -ದೂರು ದಾಖಲು

ಮಂಗಳೂರು: ನಗರದ ತೊಕ್ಕೊಟ್ಟು ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ ಮಕ್ಕಳಿಬ್ಬರು ನಾಪತ್ತೆಯಾಗಿದ್ದಾರೆ.
ಸ್ಕೈಹೈಟ್ಸ್‌ ಅಪಾರ್ಟ್‌ಮೆಂಟ್‌ ನಿವಾಸಿ ಮಂಜುಳಾ (31) ಮತ್ತು ಅವರ ಮಕ್ಕಳಾದ ಕೃಷ್ಣ (8) ಹಾಗೂ ಖುಷಿ (6) ನಾಪತ್ತೆಯಾದವರು.

ಮಂಜುಳಾ ಅವರು ಜು. 29ರಂದು ಬೆಳಗ್ಗೆ 10 ಗಂಟೆಗೆ ಫ್ಲ್ಯಾಟ್‌ನಿಂದ ಹೊರಗೆ ಹೋಗಿದ್ದು, ಬಳಿಕ ಶಾಲೆಗೆ ತೆರಳಿ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಮಂಜುಳ ಅವರ ಪತಿ ದ್ಯಾಮಣ್ಣ ಮೇಟಿ ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮಹಿಳೆ ಮತ್ತು ಮಕ್ಕಳ ಮಾಹಿತಿ ಲಭಿಸಿದಲ್ಲಿ 0824-2466269 ಈ ನಂಬರ್‌ ಗೆ ಸಂಪರ್ಕಿಸುವಂತೆ ಉಳ್ಳಾಲ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here