ದೆಹಲಿ ಅಬಕಾರಿ ನೀತಿ ಪ್ರಕರಣ-ಮನೀಶ್​ ಸಿಸೋಡಿಯಾಗೆ ಜಾಮೀನು

ಮಂಗಳೂರು (ದೆಹಲಿ):ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್​ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್​ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ತೀರ್ಪು ಹೊರಬಂದಿದೆ.

ಆಗಸ್ಟ್​ 6ರಂದು ಸಿಸೋಡಿಯಾ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್​ ತನ್ನ ತೀರ್ಪು ಕಾಯ್ದಿರಿಸಿತ್ತು. 530 ದಿನಗಳ ನಂತರ ಅಂದರೆ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮನೀಶ್​ ಸಿಸೋಡಿಯಾ ಹೊರಬರಲಿದ್ದಾರೆ.

ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು.

LEAVE A REPLY

Please enter your comment!
Please enter your name here