ಬ್ರೆಜಿಲ್ ವಿಮಾನ ಪತನ – ಜನವಸತಿ ಪ್ರದೇಶದಲ್ಲಿ ಬಿದ್ದ ವಿಮಾನ – 62 ಸಾವು

ಮಂಗಳೂರು(ಬ್ರೆಜಿಲ್): ಬ್ರೆಜಿಲ್‌ನ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ವಿಮಾನ ಪತನಗೊಂಡಿದ್ದು, ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳದ ಏಳು ತಂಡ ತೆರಳಿ ಬೆಂಕಿ ನಂದಿಸಿದೆ.

ಏರ್‌ಲೈನ್ ವೊಪಾಸ್ ಲಿನ್ಹಾಸ್ ಏರಿಯಾಸ್ ನಿರ್ವಹಿಸುತ್ತಿದ್ದ ಎಆರ್‌ಟಿ-72 ಟರ್ಬೊಪ್ರೊಪ್ ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪಾಲೊದಲ್ಲಿನ ಗೌರುಲ್ಹೋಸ್‌ಗೆ ತೆರಳುತ್ತಿತ್ತು. ಆದರೆ, ಮಾರ್ಗ ಮಧ್ಯೆ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ಪತನಗೊಂಡಿದೆ. ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ಅಪಘಾತಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ.

ಸಮೀಪದ ಕಾಂಡೋಮಿನಿಯಂ ಕಾಂಪ್ಲೆಕ್ಸ್ನಲ್ಲಿರುವ ಒಂದು ಮನೆಗೆ ಮಾತ್ರ ಹಾನಿಯಾಗಿದೆ. ನಿವಾಸಿಗಳಿಗೆ ಯಾವುದೇ ಗಾಯವಾಗಿಲ್ಲ. ವಿಮಾನ ಅಪಘಾತದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಮಾನವು ಆಕಾಶದಲ್ಲಿ ತಿರುಗುತ್ತಾ ನೆಲಕ್ಕೆ ಅಪ್ಪಳಿಸಿದೆ. ವಿಮಾನ ಭೂಮಿಗೆ ಬಿದ್ದ ಕೂಡಲೆ ಹೊತ್ತಿ ಉರಿದಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here