ದೇವಸ್ಥಾನದ ಸ್ವಯಂ ಸೇವಕರಿಂದ ಲಾಠಿ ಪ್ರಹಾರ – ಕಾಲ್ತುಳಿತಕ್ಕೆ 7 ಮಂದಿ ಬಲಿ -ಹಲವರಿಗೆ ಗಾಯ

ಮಂಗಳೂರು( ಬಿಹಾರ): ಬಿಹಾರದ ಜೆಹಾನ್ ಬಾದ್ ನ ಬಾರ್ವರ್ ಬೆಟ್ಟದ ಬಾಬಾ ಸಿದ್ದೇಶ್ವರ್ ನಾಥ್ ದೇವಸ್ಥಾನಕ್ಕೆ ಶ್ರಾವಣ ಮಾಸದಲ್ಲಿ ವರ್ಷಂಪ್ರತಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದು, ಸೇರಿದ್ದ ಭಕ್ತರ ದಟ್ಟಣೆಯನ್ನು ನಿಯಂತ್ರಿಸಲು ಸ್ವಯಂಸೇವಕರು ಲಾಠಿ ಪ್ರಹಾರ ನಡೆಸಿದ್ದರಿಂದ ಉಂಟಾದ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಸೇರಿದಂತೆ 7 ಮಂದಿ ಮೃತಪಟ್ಟ ಘಟನೆ ನಡೆದಿದೆ.

ಅಪಾರ ಸಂಖ್ಯೆಯಲ್ಲಿದ್ದ ಭಕ್ತರನ್ನು ನಿಯಂತ್ರಿಸಲು ದೇವಸ್ಥಾನದ ಸ್ವಯಂ ಸೇವಕರು ಬಲವಂತದ ಲಾಠಿ ಪ್ರಹಾರ ಮಾಡಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 35 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶ್ರಾವಣ ಮಾಸದಲ್ಲಿ ಪ್ರತಿ ವರ್ಷ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜನರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದು, ಇದುವರೆಗೆ 7 ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ದೇವಸ್ಥಾನದಲ್ಲಿ ಸೂಕ್ತ ವ್ಯವಸ್ಥೆ ಇರಲಿಲ್ಲ. ಸ್ವಯಂ ಸೇವಕರು ಭಕ್ತರನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದೇ ಘಟನೆಗೆ ಮೂಲ ಕಾರಣ ಎಂದು ತಿಳಿದು ಬಂದಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಗಾಯಾಳುಗಳನ್ನು ಮುಕುಂದಾಪುರ ಮತ್ತು ಹತ್ತಿರದ ಪ್ರದೇಶಗಳಲ್ಲಿನ ವೈದ್ಯಕೀಯ ಸೌಲಭ್ಯ ಕೇಂದ್ರಗಳಿಗೆ ಕರೆದೊಯ್ಯಲಾಗಿದ್ದು, ಪ್ರಥಮ ಚಿಕಿತ್ಸೆಯ ಬಳಿಕ 10 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಆರು ಮಂದಿ ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here