



ಮಂಗಳೂರು: 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಮಂಗಳೂರು ನಗರದ ನೆಹರು ಮೈದಾನದಲ್ಲಿ ನಡೆಯಿತು.



ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಪರೇಡ್ ವೀಕ್ಷಣೆ ಮಾಡಿದರು. ಪೊಲೀಸ್, ಅಗ್ನಿಶಾಮಕ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಪಥಸಂಚಲನ ಕಾರ್ಯಕ್ರಮ ನಡೆಯಿತು.



ಸಂಸದ ಬ್ರಿಜೇಶ್ ಚೌಟ, ಜಿಲ್ಲೆಯ ಶಾಸಕರು, ಅಧಿಕಾರಿ ವರ್ಗ ಸೇರಿದಂತೆ ಶಾಲಾ ಮಕ್ಕಳು, ಸಾರ್ವಜನಿಕರು ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಭಾಗಿಯಾದರು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.















