ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಇಂದು (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಶಾಹುಲ್ ಹಮೀದ್, ಅನ್ವರ್, ಕಿಶೋರ್ ಶೆಟ್ಟಿ ಎಂಬವರನ್ನು ಬಂಧಿಸಲಾಗಿದೆ.
ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.19ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರು ಮಹಾನಗರಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪಾಲಿಕೆ ಮುಂಭಾಗದಲ್ಲಿ ಬಸ್ಸೊಂದಕ್ಕೆ 10-15 ಜನ ಕಿಡಿಗೇಡಿಗಳು ಬಸ್ಸನ್ನು ತಡೆದು ಕಲ್ಲು ತೂರಾಟ ನಡೆಸಿ ಬಸ್ಸಿನ ಮುಂಭಾಗದ ಗಾಜನ್ನು ಒಡೆದು ನಷ್ಟ ಉಂಟುಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರನ್ನು ಬಂಧಿಸಲಾಗಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ