ಮಂಗಳೂರು: ಸಕಲೇಶಪುರ-ಬಾಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿರುವ ಮಣ್ಣು ತೆರವು ಕಾರ್ಯಚರಣೆ ಪೂರ್ಣಗೊಂಡಿದ್ದು, ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.
ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಆ.19ರ ಸಂಜೆಗೆ ಪೂರ್ಣಗೊಂಡಿದ್ದು ರೈಲು ಸಂಚಾರಕ್ಕೆ ಸಂಚಾರಕ್ಕೆ ಮುಕ್ತವಾಗಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆದರೆ ಮಣ್ಣು ಕುಸಿತ ಉಂಟಾದ ಜಾಗದಲ್ಲಿ ರೈಲಿನ ವೇಗಕ್ಕೆ ಮಿತಿ ಹೇರಲಾಗಿದೆ.