ರಸ್ತೆ ಅಪಘಾತ – ಉದ್ಯಮಿ ಆಸ್ಪತ್ರೆಯಲ್ಲಿ ನಿಧನ

ಉಡುಪಿ: ಮೂಳೂರಿನಲ್ಲಿ ಜ.15 ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮುಂಬೈ ಉದ್ಯಮಿ ಬಾಲಕೃಷ್ಣ ಜಿ ಪೂಜಾರಿ (60) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದ ಬಾಲಕೃಷ್ಣರವರು 2 ದಿನಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು.ರವಿವಾರ ಅಂಗಡಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮೂಳೂರು ಬಿಲ್ಲವರ ಸಂಘದ ಕಛೇರಿ ಮುಂಭಾಗದಲ್ಲಿ ಕಾರೊಂದು ಡಿಕ್ಕಿ ಹೊಡೆದಿದೆ.ತಲೆಗೆ ಗಂಭೀರ ಗಾಯವಾಗಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೃತರು ಪತ್ನಿ ,ಪುತ್ರಿ ,ಸಹೋದರ-ಸಹೋದರಿಯರು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here