ಲಾರಿಗಳ ನಡುವೆ ಡಿಕ್ಕಿ- ಚಾಲಕರ ಸ್ಥಿತಿ ಗಂಭೀರ

ಕಾಸರಗೋಡು: ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಚಾಲಕರು ಗಂಭೀರ ಗಾಯಗೊಂಡ ಘಟನೆ ಜ.24ರಂದು ಬೆಳಿಗ್ಗೆ ರಾಷ್ಟ್ರೀಯ  ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ.ಗಾಯಗೊಂಡ ಚಾಲಕರಿಗೆ ಕುಂಬಳೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಸಾಗುತ್ತಿದ್ದ ಲಾರಿ ಮತ್ತು ಸರಕು ಲಾರಿ ನಡುವೆ ಅಪಘಾತ ನಡೆದಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೋಡಲಾದ ಗುಂಡಿಗೆ ಬಿದ್ದಿದೆ. ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

LEAVE A REPLY

Please enter your comment!
Please enter your name here