ಸಂಭವನೀಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಲು ಕೆಪಿಸಿಸಿ ಚುನಾವಣಾ ಸಮಿತಿಯ ಸಭೆ ಇಂದು ಸಂಜೆ ನಡೆಯಲಿದೆ.

ಕನಿಷ್ಠ 100 ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಹೈಕಮಾಂಡ್‌ಗೆ ರವಾನಿಸುವ ಬಗ್ಗೆ ಕಾಂಗ್ರೆಸ್‌ ನಾಯಕರು ಈ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಟಿಕೆಟ್‌ಗಾಗಿ ಸ್ಥಳೀಯ ನಾಯಕರ ಮಧ್ಯೆ ಭಾರಿ ಪೈಪೋಟಿ ಏರ್ಪಟ್ಟಿರುವ ಕ್ಷೇತ್ರಗಳನ್ನು ಹೊರತುಪಡಿಸಿ, ಇತರ ಕ್ಷೇತ್ರಗಳಿಗೆ 2 ರಿಂದ 3 ಆಕಾಂಕ್ಷಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಬಹುತೇಕ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್‌ ಸಿಗುವುದು ಖಚಿತ ಎನ್ನಲಾಗಿದ್ದು, ಪಟ್ಟಿ ಬಿಡುಗಡೆಯ ನಂತರವೇ ಯಾರಿಗೆ ಟಿಕೆಟ್‌ ಎಂದು ತಿಳಿಯಲಿದೆ. ಹಾಲಿ ಶಾಸಕರ ಪೈಕಿ ಯಾರಾದರೂ ಸ್ಪರ್ಧೆಯಿಂದ ಹಿಂದೆ ಸರಿಯಲು ಬಯಸಿದಲ್ಲಿ ಆ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್‌ ನೀಡಬೇಕೆಂಬ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಆಗಲಿದೆ. ಫೆ.2 ನೇ ವಾರದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here