ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ- ಇಂದು ಮಹತ್ವದ ಸಭೆ

ಮಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿಯ ಮಹತ್ವದ ಸಭೆ ಇಂದು ನಡೆಯಲಿದೆ. ಪಕ್ಷದ ಜಿಲ್ಲಾ ಘಟಕ ಶಿಫಾರಸ್ಸು ಮಾಡಿರುವ, ಕೆಪಿಸಿಸಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ತಯಾರಿಸಲಾದ ಅಭ್ಯರ್ಥಿಗಳ ಪಟ್ಟಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತ್ಯೇಕವಾಗಿ ನಡೆಸಿದ ಸಮೀಕ್ಷೆ ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ಎಲ್ಲಾ ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಮೊದಲ ಹಂತದಲ್ಲಿ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿ ಪಕ್ಷದ ಹೈಕಮಾಂಡ್ ಗೆ ಕಳುಹಿಸಿಕೊಡಲು ಕೆಪಿಸಿಸಿ ಸಿದ್ದತೆ ನಡೆಸಿದೆ.

ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಮೊದಲ ಪಟ್ಟಿಯಲ್ಲಿ ಘೋಷಣೆಯಾಗಲಿದ್ದು, ಎರಡನೇ ಪಟ್ಟಿಯಲ್ಲಿ ಪುತ್ತೂರು, ಸುಳ್ಯ, ಮೂಡಬಿದ್ರೆ, ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಸವಾಲಾಗಿರುವ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಾರ್ಯ ಪೂರ್ತಿಯಾಗುವವರೆಗೆ ಅಭ್ಯರ್ಥಿಗಳು ಯಾರೆಂಬ ಚರ್ಚೆ , ಉಹಾಪೋಹಾ, ಕುತೂಹಲ ಕೊನೆಯವರೆಗೂ ಮುಂದುವರಿಯಲಿದೆ.

LEAVE A REPLY

Please enter your comment!
Please enter your name here