ಲೋಕಾಯುಕ್ತಕ್ಕೆ ದೂರು ನೀಡಿದಾತನಿಗೆ ಮಾನಸಿಕ ಹಿಂಸೆ ನೀಡುತ್ತಿರುವ ಪೊಲೀಸರು

ಮಂಗಳೂರು: ಮಂಗಳೂರು ಪೊಲೀಸ್ ಕಮೀಷನರ್, ಉಳ್ಳಾಲ ಪೊಲೀಸರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಕಬೀರ್ ಉಳ್ಳಾಲ್ ಆರೋಪಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮೂರು ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ನಂದಿಗುಡ್ಡೆ ಪ್ಲಾಟ್ ನಲ್ಲಿ ನಡೆದ ವೇಶ್ಯಾವಾಟಿಕೆ ಪ್ರಕರಣ, ಚಿನ್ನ ದರೋಡೆ ಪ್ರಕರಣ, ಮಂಗಳೂರಿನಲ್ಲಿ ಮಾದಕ ವಸ್ತು ಬಳಕೆ ಪ್ರಕರಣಗಳು ಸಿಬಿಐ ತನಿಖೆಗೆ ಒಳಪಡಿಸಿದರೆ ಭ್ರಷ್ಟಾಚಾರದ ಸಂಪೂರ್ಣ ಮಾಹಿತಿ ಬೆಳಕಿಗೆ ಬರಬಹುದು. ಈ ಬಗ್ಗೆ ಸತ್ಯ ಹೊರಬರಬೇಕಾದರೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಸಿ.ಸಿ ಕ್ಯಾಮರಾ ಫೂಟೇಜ್ ಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿರುವ ಕಬೀರ್ ಉಳ್ಳಾಲ್ ದೂರು ನೀಡಿದ ಬಳಿಕ ಪೊಲೀಸರು ನನಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಲೋಕಾಯುಕ್ತವು ಸ್ವತಂತ್ರವಾಗಿ ತನಿಖೆ ನಡೆಸುವುದನ್ನು ಬಿಟ್ಟು ಆರೋಪಿಸಿದವರನ್ನೇ ತನಿಖೆ ನಡೆಸಿ ವರದಿ ನೀಡಿ ಎಂದು ಪೊಲೀಸರಿಗೆ ಆದೇಶಿಸಿದೆ. ಈ ಮೂಲಕ ಮನೆಯ ಹತ್ತಿರ ಪೊಲೀಸರನ್ನು ಕಳಿಸುವುದು, ನೋಟಿಸ್ ನೀಡುವುದು, ಮಾಡಿ ಮಾನಸಿಕ ಧೈರ್ಯವನ್ನು ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಸರಕಾರವು ಭ್ರಷ್ಟಾಚಾರ ನಡೆಸುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದೆ ಎಂದು ಕಬೀರ್ ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here