ಗ್ರಾಮ ಪಂಚಾಯತಿಯ ನೌಕರರಿಂದ ಧರಣಿ ಸತ್ಯಾಗ್ರಹ

ಬೆಂಗಳೂರು: ಗ್ರಾಮ ಪಂಚಾಯತಿಯ ನೌಕರರನ್ನು ‘ಸಿ’ ಮತ್ತು ‘ಡಿ’ ಗ್ರೂಪ್ ಹುದ್ದೆಗಳಿಗೆ ಮೇಲ್ದರ್ಜೆಗೇರಿಸಬೇಕೆಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಗ್ರಾಮ ಪಂಚಾಯಿತಿ ನೌಕರರಾದ ಬಿಲ್ ಕಲೆಕ್ಟರ್, ಡಿಇಓಗಳಿಗೆ ‘ಸಿ’ ದರ್ಜೆ ಸ್ಥಾನಮಾನ ನೀಡಬೇಕು. ಮತ್ತು ಅಟೆಂಡರ್, ಕ್ಲೀನರ್, ವಾಟರ್ ಹಾಗೂ ಪಂಪು ಚಾಲಕ ಮುಂತಾದವರಿಗೆ ‘ಡಿ’ ದರ್ಜೆ ಸ್ಥಾನಮಾನ ನೀಡಬೇಕು. ನಗರ ಮತ್ತು ಪಟ್ಟಣ ಪಂಚಾಯತ್‍ನಂತೆ ಸೇವಾನಿಯಮಾವಳಿ ಮಾಡಬೇಕು. ನೌಕರರಿಗೆ ಕನಿಷ್ಠ ವೇತನ ಬದಲು ವೇತನ ಶ್ರೇಣಿ ನಿಗದಿಪಡಿಸಬೇಕು ಮತ್ತು ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಧರಣಿ ನಿರತರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here