ಗ್ರಾಮ ಪಂಚಾಯತ್‍ ಚುನಾವಣೆ – 2 ದಿನ ಮದ್ಯದಂಗಡಿ ಬಂದ್

ಮಂಗಳೂರು : ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 24ರ ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ 25ರ ಸಂಜೆ 6 ರವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶಿಸಿದ್ದಾರೆ. ಫೆಬ್ರವರಿ 24 ಮತ್ತು ಫೆ.25ರಂದು ಚುನಾವಣೆ ನಡೆಯಲಿದೆ. 

ಚುನಾವಣೆ ಹಿನ್ನಲೆಯಲ್ಲಿ ಮತದಾನದ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು-1ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-ಅನಂತಾಡಿಯ ಗ್ರಾಮ ಪಂಚಾಯತ್‍ನ 2-ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್‍ನ 1-ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4-ಆರ್ಯಾಪುವಿನಲ್ಲಿ ಫೆ.24 ಮತ್ತು ಫೆ.25ರಂದು  ಚುನಾವಣೆ ನಡೆಯಲಿದೆ.

 

LEAVE A REPLY

Please enter your comment!
Please enter your name here